ಬುಧವಾರ, ಜೂನ್ 10, 2015

ಪ್ರಾರ್ಥನೆ

ಸದ್ದಿರದ ಪಸುರುಡೆಯ ಮಲೆನಾಡ ಬನಗಳಲಿ
ಮೊರೆವ ತೊರೆಯೆಡೆಯಲ್ಲಿ ಗುಡಿಸಲೊಂದಿರಲಿ
ಅಲ್ಲಿ ಗಿಳಿ ಗೊರವಂಕ ಕೋಗಿಲೆಗಳಿಂಚರವು
ಕಲೆಯುತಲೆಯಲೆಯಾಗಿ ತೇಲಿ ಬರುತಿರಲಿ

ಅಲ್ಲಿ ಬಳಿ ಪಸಲೆಯಲಿ ದನಗಳಂಬಾ ಎಂಬ
ದನಿಯು ದನ ಕಾಯುವನ ಕೊಳಲೊಡನೆ ಬರಲಿ
ಅಲ್ಲಿ ಸಿರಿಗನ್ನಡದ ಕಬ್ಬಗಳ ಹಬ್ಬಗಳು
ದಿನ ದಿನವು ಸವಿಯೂಟವಿಕ್ಕುತಿರಲೆನಗೆ

ಬಾಂದಳದಿ ಹಾರಿದರು ಬುವಿಯಲ್ಲಿ ಜಾರುತಿಹ
ರಸಿಕನಾಗಿಹನೊಬ್ಬ ಗೆಳೆಯನಿರಲೆನಗೆ
ಬೈಗಾಗೆ ನಮ್ಮೊಡನೆ ಗಳಪಿಯಲೆದಡ್ಡಾಡೆ
ಗೋಪಾಲನಾಗಿರುವ ತಿಮ್ಮನೆನಗಿರಲಿ

ಮೇಲೆ ಬಾಳನು ಬಿಟ್ಟು ನಾನಳಿದು ಮರೆಯಾಗೆ
ನನ್ನಾಸೆ ಏನೆಂದು ಎಲ್ಲರರಿತಿರಲಿ
ಸಗ್ಗವಿವನೊಳಗೊಂಡು ಇರಲು ಸಗ್ಗವೆ ಇರಲಿ
ನರಕವಿವನೊಳಗೊಂಡು ಇರಲು ನರಕವೆ ಇರಲಿ

ಸಾಹಿತ್ಯ:- ಕುವೆಂಪು 

1 ಕಾಮೆಂಟ್‌: